ADVERTISEMENT

ಕರಡಿ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 17:01 IST
Last Updated 4 ಜುಲೈ 2022, 17:01 IST
   

ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು): ಸಮೀಪದ ಗೊಲ್ಲರಹಳ್ಳಿ ಗ್ರಾಮದ ಹೊರವಲಯದ ಕಾಳಮ್ಮನ ಬಂಡೆ ಬಳಿ ಸೋಮವಾರ ಸಂಜೆ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಂಜೆ ಗ್ರಾಮದ ಹೊರವಲಯದಲ್ಲಿ ಕರಡಿ ಓಡಾಡುತ್ತಿರುವುದನ್ನು ಯುವಕರು ಮೊಬೈಲ್‌ನಲ್ಲಿ ಸೆರೆ ಹಿಡಿದು, ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಚಿಲಕನಹಟ್ಟಿ ಉಪವಲಯ ಅರಣ್ಯಾಧಿಕಾರಿ ಹೊನ್ನೂರಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕರಡಿ ಓಡಿಸುವ ಪ್ರಯತ್ನ ನಡೆಸಿದ್ದಾರೆ. ಕಾಳಮ್ಮನ ಬಂಡಿಯ ಅನತಿ ದೂರದಲ್ಲೇ ಸರ್ಕಾರಿ ಶಾಲೆ ಇರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಈ ಭಾಗದಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ. ಜನರು ಭಯದಲ್ಲಿ ಓಡಾಡುವಂತಾಗಿದೆ. ಅರಣ್ಯ ಇಲಾಖೆಯವರಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಮುಖಂಡ ಸುರೇಶ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT