ADVERTISEMENT

ವಿಜಯನಗರ: ವಾಹನ‌ ಡಿಕ್ಕಿ, ಕರಡಿ ಸಾವು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 6:12 IST
Last Updated 2 ಸೆಪ್ಟೆಂಬರ್ 2025, 6:12 IST
   

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ನಾಲ್ಕರಿಂದ ಐದು ವರ್ಷದ ಗಂಡು ಕರಡಿ ಬೆಳಗಿನ ಜಾವ ಜರಿಮಲೆ ಕಾಡಿನತ್ತ ಹೋಗಲು ಹೆದ್ದಾರಿ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಕರಡಿ ಸ್ಥಳದಲ್ಲಿಯೇ ಸತ್ತಿದೆ ಎಂದು ಅರಣ್ಯ ಇಲಾಝೆ ಅಧಿಕಾರಿಗಳು ತಿಳಿಸಿದ್ದಾರೆ.

ಕರಡಿಯ ಶವ ಪರೀಕ್ಷೆ ಮಾಡಿಸಿ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೂಡ್ಲಿಗಿ ವಲಯ ಅರಣ್ಯಾಧಿಕಾರಿ ಸಂದೀಪ್ ನಾಯಕ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.