ADVERTISEMENT

'ಭಾರತ್ ಜೋಡೋ' ಸಿದ್ದರಾಮಯ್ಯ-ಡಿಕೆಶಿ ಜೋಡಿಸುವ ಯಾತ್ರೆ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 8:15 IST
Last Updated 13 ಅಕ್ಟೋಬರ್ 2022, 8:15 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಹೂವಿನಹಡಲಿ (ವಿಜಯನಗರ): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ' ಯಾತ್ರೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ ಅವರನ್ನು ಜೋಡಿಸುವ ಯಾತ್ರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.

ಜಿಲ್ಲೆಯ ಹೂವಿನಹಡಗಲಿಯಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಹಸಿ ಸುಳ್ಳು ಹೇಳಲು ಭಾರತ್ ಜೋಡೋ ಯಾತ್ರೆ ಮೂಲಕ ನಮ್ಮ ನಡುವೆ ಬರುತ್ತಿದ್ದಾರೆ ಎಂದು ಹೇಳಿದರು.

ಅನ್ನ ಭಾಗ್ಯ ಯೋಜನೆ ತಮ್ಮ ಯೋಜನೆಯೆಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ವಾಸ್ತವದಲ್ಲಿ ಅದು ಜನತಾ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಕಾಂಗ್ರೆಸ್ ನವರು ಈ ದೇಶ, ರಾಜ್ಯಕ್ಕೆ ಏನೂ ಮಾಡಿಲ್ಲ. ಮೋಸ ಮಾಡುವ, ಸುಳ್ಳು ಹೇಳುವ ಕಾಂಗ್ರೆಸ್ಸಿಗರ ಕೈಗೆ ಅಧಿಕಾರ ಕೊಡಬೇಡಿ ಎಂದರು.

ADVERTISEMENT

ಸಿಂಗಟಾಲೂರು ಯೋಜನೆಯಿಂದ ಹಡಗಲಿ ತಾಲ್ಲೂಕಿನಲ್ಲಿ 35 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಲಾಗುತ್ತಿದೆ. 17ಕೆರೆಗಳನ್ನು ತುಂಬಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.