ADVERTISEMENT

ಭೂಪಾಳ್‌ ರಾಘವೇಂದ್ರ ಶೆಟ್ಟಿ ನಿಧನ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 6:24 IST
Last Updated 18 ನವೆಂಬರ್ 2025, 6:24 IST
ಭೂಪಾಳ್ ರಾಘವೇಂದ್ರ ಶೆಟ್ಟಿ
ಭೂಪಾಳ್ ರಾಘವೇಂದ್ರ ಶೆಟ್ಟಿ   

ಹೊಸಪೇಟೆ: ಇಲ್ಲಿನ ನಿವಾಸಿ ಭೂಪಾಳ್‌ ರಾಘವೇಂದ್ರ ಶೆಟ್ಟಿ (84) ಶನಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಆರ್ಯವೈಶ್ಯ ಸಂಘದ ಅಧ್ಯಕ್ಷರಾಗಿ ಮೂರು ವರ್ಷ ಹಾಗೂ ಕಾರ್ಯದರ್ಶಿಯಾಗಿ 27 ವರ್ಷ ಕಾರ್ಯ ನಿರ್ವಹಿಸಿದ್ದರು. ಸಹಕಾರ ಕಲ್ಯಾಣ ಮಂಟಪ, ಹೊಸಪೇಟೆ ಗೃಹನಿರ್ಮಾಣ ಸಂಘ, ಪತಂಜಲಿ ಯೋಗ ಸಮಿತಿ ಸೇರಿದಂತೆ ಹಲವು ಸಂಘ–ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಇಲ್ಲಿನ ಜಂಬುನಾಥ ರಸ್ತೆಯ ಆರ್ಯವೈಶ್ಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT