ಹೊಸಪೇಟೆ (ವಿಜಯನಗರ): ನಗರದ ಬಸವಣ್ಣ ಕಾಲುವೆ ಸ್ವಚ್ಛತಾ ಕಾರ್ಯ ಕೈಗೊಂಡಿದ್ದ ವೇಳೆ ನವೆಂಬರ್ 8ರಂದು ಆರೇಳು ಭ್ರೂಣಗಳು ಪತ್ತೆಯಾಗಿರುವ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಒಂದು ತಿಂಗಳ ಬಳಿಕವೂ ಯಾವುದೇ ಪ್ರಕರಣ ದಾಖಲಿಸದೆ, ತನಿಖೆ ನಡೆಸದೆ ಇರುವುದನ್ನು ಭಗತ್ ಸಿಂಗ್ ರಕ್ತದಾನಿಗಳ ಸಂಘ ಪ್ರಶ್ನಿಸಿದೆ.
ಸಂಘದ ಅಧ್ಯಕ್ಷ ಕೆ.ಎಂ.ಸಂತೋಷ್ ಕುಮಾರ್ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ಆರೋಗ್ಯ ಇಲಾಖೆಯು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆಯೇ ಎಂದು ಕೇಳಿದ್ದಾರೆ.
ಭ್ರೂಣಗಳ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿ ಇಲಾಖೆ ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ಮಾಡಬೇಕು, ತಪ್ಪಿತಸ್ಥ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.