ADVERTISEMENT

ರಾಯರೆಡ್ಡಿ ಹೇಳಿಕೆಯಿಂದ ನಿಜ ಬಣ್ಣ ಬಯಲು: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 6:18 IST
Last Updated 8 ಜುಲೈ 2025, 6:18 IST
ಸಂಜೀವ ರೆಡ್ಡಿ
ಸಂಜೀವ ರೆಡ್ಡಿ   

ಹೊಸಪೇಟೆ: ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ‘ನಿಮಗೆ ರಸ್ತೆ, ಶಾಲೆ, ಅಭಿವೃದ್ಧಿ ಕಾರ್ಯಗಳು ಬೇಕೆಂದರೆ, ಗ್ಯಾರಂಟಿಗಳನ್ನು ಬಿಡಬೇಕು’ ಎಂದು ತಮ್ಮ ಕ್ಷೇತ್ರದ ಜನತೆಗೆ ಹೇಳಿರುವುದರಿಂದ ಸರ್ಕಾರದ ನಿಜ ಬಣ್ಣ ಬಯಲಾದಂತಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಂಜೀವ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನೀವು ಒಪ್ಪಿದರೆ ಗ್ಯಾರಂಟಿ
ಯೋಜನೆಗಳನ್ನು ನಿಲ್ಲಿಸಲು ಮುಖ್ಯಮಂತ್ರಿ ಅವರಿಗೆ ಹೇಳುತ್ತೇನೆ, ಆ ನಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಆಗುತ್ತೆ’ ಎಂದು ರಾಯರೆಡ್ಡಿ ತಿಳಿಸಿದ್ದಾರೆ. ಸರ್ಕಾರದ ಮನಸ್ಥಿತಿ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಈ ಹೇಳಿಕೆ ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

‘ಎಲ್ಲಾ ವಿಭಾಗಗಳಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರವು ಜನರ ನಂಬಿಕೆ ಕಳೆದುಕೊಂಡಿದೆ, ಸಿಎಂ ಅವರು ಈ ಹೇಳಿಕೆಯನ್ನು ತಮ್ಮ ಆರ್ಥಿಕ ಸಲಹೆಗಾರರ ಮೂಲಕ ಹೇಳಿಸಿದಂತಿದೆ, ಮುಖ್ಯಮಂತ್ರಿ ಅವರು ರಾಜೀನಾಮೆ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.