
ಕೊಟ್ಟೂರು (ವಿಜಯನಗರ ಜಿಲ್ಲೆ): ‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಬಡಿದಾಟವೂ ಇಲ್ಲ. ಇರುವುದೊಂದೇ, ಅದು ಬಿಜೆಪಿ ಬಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ಹೇಳಿದರು.
ಬಿಜೆಪಿಯಲ್ಲಿನ ಕೆಲ ಭಿನ್ನಮತೀಯರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ವಿಷಯದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಕೇಂದ್ರ ಸಚಿವರು. ಅವರನ್ನು ಯಾರು ಬೇಕಾದರೂ ಭೇಟಿ ಆಗಬಹುದು. ಶಾಸಕರು ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಭೇಟಿ ಮಾಡಬಹುದು’ ಎಂದರು.
ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಬಿಜೆಪಿ ನಾಯಕರ ಸಂಪರ್ಕದಲ್ಲಿ ಇರುವ ವಿಷಯ ಕೇಳಿದಾಗ, ‘ಇದರ ಮಾಹಿತಿ ನನಗಿಲ್ಲ’ ಎಂದರು. ‘ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು ಕುರ್ಚಿ ಕಿತ್ತಾಟದಲ್ಲಿ ತೊಡಗಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.