ಹೊಸಪೇಟೆ (ವಿಜಯನಗರ): ‘ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಚೆ ಹೊಡೆಯಿರಿ’ ಎಂಬ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ಅವರ ಪ್ರತಿಕೃತಿ ದಹಿಸಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬುಧವಾರ ಇಲ್ಲಿ ಬಂಧಿಸಿದರು.
ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ ಎಂದು ಹೇಳಲಾಗಿದೆ.
ಕಾರ್ಯಕರ್ತರು ಜಮಾಯಿಸುವ ಮೊದಲೇ ಪೊಲೀಸರು ಸ್ಥಳಕ್ಕೆ ಬಂದು ಕಾರ್ಯಕರ್ತರನ್ನು ಬಂಧಿಸಲು ಸಿದ್ಧತೆ ನಡೆಸಿದ್ದರು. ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿಚಡಿ ಕೊಟ್ರೇಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಕಾರ್ಯಕರ್ತರನ್ನು ಸುತ್ತುವರಿದರು. ತಂಗಡಗಿ ಅವರ ಪ್ರತಿಕೃತಿ ದಹಿಸುವ ಉದ್ದೇಶ ಇತ್ತು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡದೆ ಕಾರ್ಯಕರ್ತರನ್ನು ಬಂಧಿಸಿ, ಪಟ್ಟಣ ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.