ಹರಪನಹಳ್ಳಿ: ತಾಲ್ಲೂಕಿನ ಬೆಣ್ಣಿಹಳ್ಳಿಯಲ್ಲಿ ಹಗರಿಬೊಮ್ಮನಹಳ್ಳಿ ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ವತಿಯಿಂದ ರಕ್ತದಾನ ಶಿಬಿರ ಜರುಗಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಟಾಸ್ಕ್ ಫೋರ್ಸ್ ಸಮಿತಿ, ಏಡ್ಸ್ ನಿಯಂತ್ರಣ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಜರುಗಿದ ಶಿಬಿರದಲ್ಲಿ 42 ಜನರು ರಕ್ತದಾನ ಮಾಡಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಮ್ಮ, ಪಿಡಿಒ ಹುಲಿಗೆಮ್ಮೆ, ಕಾರ್ಯದರ್ಶಿ ನಿಂಗರಾಜ್, ವೈದ್ಯ ಡಾ.ವೆಂಕಟೇಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.