ಸಾಂದರ್ಭಿಕ ಚಿತ್ರ
ಕೂಡ್ಲಿಗಿ (ವಿಜಯನಗರ ಜಿಲ್ಲೆ): ಪಟ್ಟಣದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸೇತುವೆಯಲ್ಲಿ ಭಾನುವಾರ ನಸುಕಿನಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.
ಕಾರಿನ ಚಾಲಕ ವಿನಯ್ ಹಾಗೂ ಚೆನ್ನಬಸವ ಮೃತರಾಗಿದ್ದು, ಸಚಿನ್, ಗೌರವ್, ಕಾರ್ತಿಕ್, ಪ್ರಭು ಮತ್ತು ಸಾಗರ್ ಗಾಯಗೊಂಡಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಕೇರಳದ ವೈನಾಡಿಗೆ ಹೊರಟಿದ್ದ ಇವರು ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ ಕೂಡ್ಲಿಗಿ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸೇತುವೆ ಮೇಲೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಚೆನ್ನಬಸವ ಹಾಗೂ ಕಾರಿನ ಚಾಲಕ ವಿಜಯ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಗಾಯಗೊಂಡಿದ್ದ ಸಚಿನ್ ಹಾಗೂ ಗೌರವ್ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,
ಕಾರ್ತಿಕ್, ಪ್ರಭು ಹಾಗೂ ಸಾಗರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಆಸ್ಪತ್ರೆಗೆ ಕಳಿಸಲಾಗಿದೆ.
ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.