ಹೊಸಪೇಟೆ (ವಿಜಯನಗರ): ಕೋವಿಡ್–19 ನಿಷೇಧಾಜ್ಞೆ ಉಲ್ಲಂಘಿಸಿ ವಹಿವಾಟು ನಡೆಸುತ್ತಿದ್ದ ಇಲ್ಲಿನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಐದು ಅಂಗಡಿ ಮಾಲೀಕರ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.
ಜೆನ್ಕೊ ಬೇರಿಂಗ್ ಪ್ರೈವೇಟ್ ಲಿಮಿಟೆಡ್‌ನ ಪವನಕುಮಾರ್, ಜೆಎಸ್‌ಡಬ್ಲ್ಯೂ ಗ್ರೂಪ್ ಬಣ್ಣದ ಅಂಗಡಿ ಮಾಲೀಕ ಜಾಹೀರ್ ಅಹಮ್ಮದ್, ಚಪ್ಪಲಿ ಮಳಿಗೆ ಮಾಲೀಕ ಸೈಯದ್ ಅಸ್ಲಂ, ಭದ್ರಿ ಹಾರ್ಡ್‌ವೇರ್‌ನ ರಾಜಸಾಬ್ ಗೂಡ್‌ಸಾಬ್, ಕ್ಲಾನಿಕ್ ಎಲೆಕ್ಟ್ರಿಕಲ್ ಅಂಗಡಿಯ ನಿಸಾರ್ ಅಹಮ್ಮದ್ ವಿರುದ್ಧ ಪ್ರಕರಣ ದಾಖಲಾಗಿದೆ.
‘ನಿಷೇಧಾಜ್ಞೆ ಉಲ್ಲಂಘಿಸಿ ಅವಧಿ ಮೀರಿ, ಹೆಚ್ಚಿನ ಜನರನ್ನು ಸೇರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದ ಐದು ಮಳಿಗೆ ಮಾಲೀಕರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.