ADVERTISEMENT

ಕೂಡ್ಲಿಗಿ | ರಾಸಾಯನಿಕ ಸೋರಿಕೆ: 13 ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 17:10 IST
Last Updated 30 ಜುಲೈ 2025, 17:10 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಎ.ಐ ಚಿತ್ರ

ಕೂಡ್ಲಿಗಿ (ವಿಜಯನಗರ ಜಿಲ್ಲೆ): ಇಲ್ಲಿನ ಬಸ್‌ ನಿಲ್ದಾಣ ಪಕ್ಕದಲ್ಲಿನ ಪಟ್ಟಣ ಪಂಚಾಯಿತಿಗೆ ಸೇರಿದ ಗೋದಾಮಿನಲ್ಲಿ ಮಂಗಳವಾರ ರಾತ್ರಿ ಕ್ಲೋರಿನ್‌ ತುಂಬಿದ್ದ ಸಿಲಿಂಡರ್‌ ಸೋರಿಕೆಯಾಗಿ 13 ಮಂದಿ ಅಸ್ವಸ್ಥಗೊಂಡಿದ್ದಾರೆ.

ADVERTISEMENT

‘ಸೋರಿಕೆ ಆಗುತ್ತಿದ್ದ ಸಿಲಿಂಡರ್‌ ತೆರವುಗೊಳಿಸುತ್ತಿದ್ದ ಆರು ಮಂದಿ ಅಗ್ನಿಶಾಮಕ ಸಿಬ್ಬಂದಿ, ಗೃಹರಕ್ಷಕ ಸಿಬ್ಬಂದಿ, ಪಟ್ಟಣ ಪಂಚಾಯಿತಿ ಮತ್ತು ಐವರು ಸ್ಥಳೀಯರು ಅಸ್ವಸ್ಥಗೊಂಡರು. ಎಲ್ಲರನ್ನೂ ಬಳ್ಳಾರಿ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.