ADVERTISEMENT

ಹೊಸಪೇಟೆ: ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 6:01 IST
Last Updated 26 ಫೆಬ್ರುವರಿ 2026, 6:01 IST
ಕಡಲೆಕಾಳು
ಕಡಲೆಕಾಳು   

ಹೊಸಪೇಟೆ: ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು. ಜಿಲ್ಲೆಯಲ್ಲಿ ಒಟ್ಟು 4 ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು, ಸಹಕಾರ ಮಾರಾಟ ಮಹಾಮಂಡಳಿ ವತಿಯಿಂದ ಪ್ರತಿ ಕ್ವಿಂಟಲ್‌ಗೆ ₹5,875ರಂತೆ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್ ನಂತೆ ಗರಿಷ್ಠ 40 ಕ್ವಿಂಟಲ್ ಉತ್ಪನ್ನವನ್ನು ಖರೀದಿಸಲಾಗುತ್ತದೆ.

ಈಗಾಗಲೇ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಉತ್ಪನ್ನ ಖರೀದಿಸಲಾಗುತ್ತದೆ. ಜಿಲ್ಲೆಯ ಕೋಗಳಿ, ಹರಪನಹಳ್ಳಿ, ಹಿರೇಹಡಗಲಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರೈತರು ನೋಂದಣಿ ಮತ್ತು ಖರೀದಿಗಾಗಿ ಪ್ರಸಕ್ತ ಸಾಲಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಎಫ್‌ಐಡಿ ದಾಖಲೆಗಳೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ತಾಂತ್ರಿಕ ದೋಷಗಳಿದ್ದಲ್ಲಿ ಸಮೀಪದ ಕೃಷಿ ಇಲಾಖೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್‌ ಫೋರ್ಸ್ ಸಮಿತಿ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT