
ಹೊಸಪೇಟೆ (ವಿಜಯನಗರ): ಜಿಲ್ಲೆಯಾದ್ಯಂತ ಬಾಲ್ಯವಿವಾಹ, ಪೋಕ್ಸೊ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಪಿಡಿಒಗಳ ಪಾತ್ರ ಪ್ರಮುಖವಾಗಿದೆ. ಅವರು ಸಕ್ರಿಯವಾಗಿದ್ದರೆ ಈ ಪಿಡುಗುಗಳಿಗೆ ಕಡಿವಾಣ ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಹೇಳಿದರು.
ಇಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯವಿವಾಹ, ಪೋಕ್ಸೊ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕುರಿತು ಪಿಡಿಒಗಳಿಗೆ ಏರ್ಪಡಿಸಿದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಇಂದಿಗೂ ಜಿಲ್ಲೆ ಹಾಗೂ ರಾಜ್ಯಾಜ್ಯದಾದ್ಯಂತ ಬಾಲ್ಯವಿವಾಹ, ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿವೆ. ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳ ಹೆಚ್ಚಾಗಿ ಕಂಡು ಬರುತ್ತಿವೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿ ಇಂತಹ ಪ್ರಕರಣಗಳು ದಾಖಲಾಗದಂತೆ ಜಾಗ್ರತೆಯಿಂದ ಕಾರ್ಯನಿರ್ವಹಿಸವಬೇಕಿದೆ’ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಭಟ್ ಅವರು ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.