ADVERTISEMENT

ಹಗರಿಬೊಮ್ಮನಹಳ್ಳಿ: ಮತ ಕಳವು ವಿರುದ್ಧ 1.25 ಲಕ್ಷ ಸಹಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 4:18 IST
Last Updated 10 ನವೆಂಬರ್ 2025, 4:18 IST
<div class="paragraphs"><p>ಹಗರಿಬೊಮ್ಮನಹಳ್ಳಿಯಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿರಾಜ್ ಷೇಖ್ ಅವರು ‘ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನದಲ್ಲಿ ಭಾಗವಹಿಸಿ ಸಹಿ ಮಾಡಿದ ಫಾರಂಗಳನ್ನು ಪ್ರದರ್ಶಿಸಿದರು</p></div>

ಹಗರಿಬೊಮ್ಮನಹಳ್ಳಿಯಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿರಾಜ್ ಷೇಖ್ ಅವರು ‘ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನದಲ್ಲಿ ಭಾಗವಹಿಸಿ ಸಹಿ ಮಾಡಿದ ಫಾರಂಗಳನ್ನು ಪ್ರದರ್ಶಿಸಿದರು

   

ಹಗರಿಬೊಮ್ಮನಹಳ್ಳಿ: ‘ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ‘ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನದಿಂದ ಆರಂಭಗೊಂಡ ಸಹಿ ಸಂಗ್ರಹ ಚಳವಳಿಯಲ್ಲಿ ಜಿಲ್ಲೆಯ 1.25 ಲಕ್ಷ ಮತದಾರರು ಸಹಿ ಮಾಡಿದ ಫಾರಂಗಳನ್ನು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಶನಿವಾರ ಕಳುಹಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿರಾಜ್ ಷೇಖ್ ಹೇಳಿದರು.

ತಾಲ್ಲೂಕಿನ ಬಂಡಿಹಳ್ಳಿಯ ಕಚೇರಿಯಲ್ಲಿ ಶನಿವಾರ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಹೊಸಪೇಟೆಯಲ್ಲಿ 55 ಸಾವಿರ, ಹಗರಿಬೊಮ್ಮನಹಳ್ಳಿಯಲ್ಲಿ 25 ಸಾವಿರ, ಕೂಡ್ಲಿಗಿಯಲ್ಲಿ 20 ಸಾವಿರ, ಹರಪನಹಳ್ಳಿಯಲ್ಲಿ 10 ಸಾವಿರ ಸೇರಿದಂತೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಕ್ರೋಢಿಕರಿಸಿ ಕಳುಹಿಸಲಾಗಿದೆ. ಜಿಲ್ಲೆಯ ಸಾಮಾನ್ಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು ಪಕ್ಷ ನೀಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ’ ಎಂದರು.

ADVERTISEMENT

‘ಕೇಂದ್ರದ ಬಿಜೆಪಿ ಸರ್ಕಾರ ವಾಮಮಾರ್ಗಗಳ ಮೂಲಕ ಅಧಿಕಾರ ಗಿಟ್ಟಿಸಿಕೊಂಡಿದೆ. ಈ ಮೂಲಕ ಜನತಂತ್ರ ವ್ಯವಸ್ಥೆ ಕಗ್ಗೊಲೆಯಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕು. ಅಂಬೇಡ್ಕರ್ ಆಶಯಗಳು ಈಡೇರಬೇಕೆಂದರೆ ಕೇಂದ್ರದಲ್ಲಿ ಹಿಂಬಾಗಿಲ ಮೂಲಕ ಅಧಿಕಾರ ಗಿಟ್ಟಿಸಿರುವ ಮತದಾನದ ಕಳ್ಳರು ಅಧಿಕಾರದಿಂದ ಕೆಳಗೆ ಇಳಿಯಬೇಕು’ ಎಂದಯ ಆಗ್ರಹಿಸಿದರು.

‘ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಪಕ್ಷವನ್ನು ಸಂಘಟಿಸಿ 2028ರಲ್ಲಿ ಕಾಂಗ್ರೆಸ್ ಕೈವಶ ಮಾಡಿಕೊಳ್ಳುವ ಕುರಿತು ಬೇರುಮಟ್ಟದಿಂದ ಸಂಘಟಿಸಲಾಗುವುದು. ಪಕ್ಷದ ಬಲವರ್ಧನೆಗಾಗಿ ವಿವಿಧ ಕಡೆಗಳಲ್ಲಿ ಗುರುತಿಸಿಕೊಂಡಿರುವ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳನ್ನು ಸ್ವಾಗತಿಸಲಾಗುವುದು. ಮೂರು ತಿಂಗಳ ಬಳಿಕ ಪಟ್ಟಣದ ಬೃಹತ್ ಸಮಾವೇಶ ಕೈಗೊಂಡು ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳಲಾಗುವುದು’ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ.ಎಂ.ಹಾಲಪ್ಪ, ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಒಬಿಸಿ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ತಮ್ಮನ್ನೆಳ್ಳಪ್ಪ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಖಾಜಾ ಹುಸೇನ್, ಹೂವಿಹಡಗಲಿಯ ಅಟವಾಳಗಿ ಕೊಟ್ರೇಶ್, ಶೇಖ್ ತಾಜೂದ್ದೀನ್, ಜಿ.ಶಿವಕುಮಾರ್, ಹುಡೇದ ಗುರುಬಸವರಾಜ, ಹಫೀಜ್ ಷೇಖ್, ಕೆ.ರಮೇಶ್, ಸೋಗಿ

ಕೊಟ್ರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.