ADVERTISEMENT

ಇದೇ ತಿಂಗಳಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 21:24 IST
Last Updated 3 ಜನವರಿ 2023, 21:24 IST
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಮಾಲವಿ ಜಲಾಶಯದ ವಿಜಯೋತ್ಸವದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಬೆಳ್ಳಿ ಗದೆ ಕೊಟ್ಟು ಸನ್ಮಾನಿಸಲಾಯಿತು. ಶಾಸಕರಾದ ಭೀಮ ನಾಯ್ಕ, ಜಮೀರ್‌ ಅಹಮ್ಮದ್‌ ಖಾನ್‌, ಬೈರತಿ ಸುರೇಶ್‌ ಇತರರಿದ್ದಾರೆ–ಪ್ರಜಾವಾಣಿ ಚಿತ್ರಗಳು

ಹಗರಿಬೊಮ್ಮನಹಳ್ಳಿ/ಹೊಸಪೇಟೆ (ವಿಜಯನಗರ): ‘ವಿಧಾನಸಭಾ ಚುನಾ ವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಗೊಳಿಸುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿನ ಮಾಲವಿ ಜಲಾಶಯ 13 ವರ್ಷಗಳ ನಂತರ ಭರ್ತಿಯಾದ ಹಿನ್ನೆಲೆಯಲ್ಲಿ ಶಾಸಕ ಭೀಮಾನಾಯ್ಕ ಮಂಗಳವಾರ ಏರ್ಪಡಿಸಿದ್ದ ‘ಸಾರ್ಥಕ ನಮನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಪತ್ರಕರ್ತರೊಂ
ದಿಗೆ ಮಾತನಾಡಿದರು. ರಾಜ್ಯದಾದ್ಯಂತ ಕಾಂಗ್ರೆಸ್ ಪರ ಅಲೆ ಇರುವುದರಿಂದಲೇ ಈ ಸಲ‌ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT