ADVERTISEMENT

ವಿಶ್ವಗುರು ಅಡಿಪಾಯ ಹಾಕಿದ್ದೇ ಕಾಂಗ್ರೆಸ್‌: ಕೆ.ಎಂ.ಹಾಲಪ್ಪ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 5:14 IST
Last Updated 29 ಡಿಸೆಂಬರ್ 2025, 5:14 IST
ಹೊಸಪೇಟೆಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು
ಹೊಸಪೇಟೆಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು   

ಹೊಸಪೇಟೆ (ವಿಜಯನಗರ): ಭಾರತ ಇಂದು ವಿಶ್ವಗುರುವಾಗುವತ್ತ ದಾಪುಗಾಲು ಇಡುತ್ತಿದೆ, ಇದಕ್ಕೆ ಬುನಾದಿ ಹಾಕಿದ್ದೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಕೆ.ಎಂ.ಹಾಲಪ್ಪ ಹೇಳಿದರು.

ಅವರು ಭಾನುವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಪಕ್ಷದ ಲಕ್ಷಾಂತರ ಮಹಾನ್ ನಾಯಕರ ತ್ಯಾಗ, ಬಲಿದಾನಗಳಿಂದ ಭಾರತ ಬ್ರಿಟಿಷರ ದಬ್ಬಾಳಿಕೆಯಿಂದ ಬಿಡುಗಡೆಗೊಂಡರೂ ಭಾರತದ ಸುವರ್ಣ ಯುಗವನ್ನು ಮರು ಸ್ಥಾಪಿಸಲು ಕಾಂಗ್ರೆಸ್ ಪಕ್ಷವೇ ಮುನ್ನುಡಿ ಬರೆಯಿತು. ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರ ದೂರದೃಷ್ಟಿಯಿಂದಾಗಿ ಮೂಲ ಸೌಕರ್ಯಗಳು ಜನತೆಗೆ ಲಭಿಸುವಂತಾಯಿತು’ ಎಂದರು.

ADVERTISEMENT

‍ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಉಪಾಧ್ಯಕ್ಷ ಕೆ.ರಮೇಶ, ಸೇವಾದಳ ಜಿಲ್ಲಾ ಸಂಘಟಕ ಬಿ.ಮಾರೆಣ್ಣ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮನ್ನೆಳ್ಳಪ್ಪ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಣ್ಣದ ಮನೆ ಸೋಮಶೇಖರ್, ಮುಖಂಡರಾದ ವಿಜಯಕುಮಾರ್, ವೆಂಕಟೇಶ್ವರಲು, ಗೋವಿಂದಪ್ಪ , ಅಂತೋಣಿ ದಾಸ್, ರುಕ್ಸಾನ, ಜಾಹೀದಾ, ಪರ್ವಿನ್, ಆಶಾ ಬಾನು, ಗಂಗಮ್ಮ, ಉಮಾ, ದಾನಮ್ಮ, ಲಕ್ಷ್ಮೀ  ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.