ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ನಿಮಿತ್ತ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮರ್ಪಣಾ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಸಮಾವೇಶದ ವೇದಿಕೆಯಲ್ಲಿ ಸಾಂಕೇತಿಕವಾಗಿ ಸುಮಾರು 40 ಮಂದಿಗೆ ಹಕ್ಕುಪತ್ರ ವಿತರಿಸಲಾಯಿತು. ನಗರ ಪ್ರದೇಶಗಳಲ್ಲಿಯೂ ಹಕ್ಕುಪತ್ರ ನೀಡುವ ಮೂಲಕ ರಾಜ್ಯದ ಜನರಿಗೆ ಏಳನೇ ಗ್ಯಾರಂಟಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಷ್ಠೆ ಬದಿಗೊತ್ತಿ ಒಳ ಮೀಸಲಾತಿ ಜಾರಿಗೆ ಎಲ್ಲರೂ ಶ್ರಮಿಸಬೇಕು ಎಂದು ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.