ADVERTISEMENT

ಮಹಮ್ಮದ್‌ ನಿಯಾಜಿ ಬೆಂಬಲಿಗರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 11:20 IST
Last Updated 27 ಮಾರ್ಚ್ 2023, 11:20 IST
ಕಾಂಗ್ರೆಸ್‌ ಪ್ರಚಾರ ಸಮಿತಿ ವಿಜಯನಗರ ಜಿಲ್ಲಾಧ್ಯಕ್ಷ ಮಹಮ್ಮದ್‌ ಇಮಾಮ್‌ ನಿಯಾಜಿ ಅವರ ಬೆಂಬಲಿಗರು ಹೊಸಪೇಟೆಯ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
ಕಾಂಗ್ರೆಸ್‌ ಪ್ರಚಾರ ಸಮಿತಿ ವಿಜಯನಗರ ಜಿಲ್ಲಾಧ್ಯಕ್ಷ ಮಹಮ್ಮದ್‌ ಇಮಾಮ್‌ ನಿಯಾಜಿ ಅವರ ಬೆಂಬಲಿಗರು ಹೊಸಪೇಟೆಯ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ್ದನ್ನು ವಿರೋಧಿಸಿ ಪಕ್ಷದ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್‌ ಇಮಾಮ್‌ ನಿಯಾಜಿ ಅವರ ಬೆಂಬಲಿಗರು ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಿಯಾಜಿ ಅವರಿಗೆ ಜಯವಾಗಲಿ, ಟಿಕೆಟ್‌ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

‘ಪಕ್ಷ ಸಂಭಾವ್ಯ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಆದರೆ, ಇದೇ ಅಂತಿಮವಲ್ಲ. ‘ಬಿ’ ಫಾರಂ ನೀಡಿದ ಬಳಿಕವಷ್ಟೇ ಅಭ್ಯರ್ಥಿಗಳು ಅಂತಿಮಗೊಳ್ಳುತ್ತಾರೆ. ನಾನು ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. ನನಗೆ ಟಿಕೆಟ್‌ ಸಿಗುವ ಭರವಸೆ ಇದೆ. ನನ್ನ ಪರ ಪ್ರತಿಭಟನೆ ನಡೆಸುವಂತೆ ಬೆಂಬಲಿಗರಿಗೆ ಹೇಳಿಲ್ಲ. ಅವರು ಪ್ರತಿಭಟನೆ ನಡೆಸಿದ ವಿಚಾರವೇ ಗೊತ್ತಿಲ್ಲ’ ಎಂದು ನಿಯಾಜಿ ಅವರು ಪತ್ರಕರ್ತರಿಗೆ ತಿಳಿಸಿದರು.

ADVERTISEMENT

‘ಚುನಾವಣೆಗೆ ಇನ್ನೂ ಸಾಕಷ್ಟು ಕಾಲಾವಕಾಶ ಇದೆ. ಕೆಲವರ ಹೆಸರು ಬದಲಾಗಬಹುದು. ವಿಜಯನಗರದಲ್ಲಿ ಕೂಡ ನನಗೆ ಟಿಕೆಟ್‌ ಸಿಗುವ ಭರವಸೆ ಇದೆ. ನನಗೆ ‘ಬಿ’ ಫಾರಂ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ನಾನು ಎಲ್ಲ ಸಮಾಜದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಟಿಕೆಟ್‌ ಸಿಕ್ಕರೆ ಕಾಂಗ್ರೆಸ್‌ ಗೆಲ್ಲಬಹುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.