
ಆನಂದ ಹೆಗಡೆ
ಹೂವಿನಹಡಗಲಿ (ವಿಜಯನಗರ): ಹುಬ್ಬಳ್ಳಿಯ ಉದ್ಯಮಿ ಹಾಗೂ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಅವರು ಪಟ್ಟಣದ ದಾಕ್ಷಾಯಣಿ ಲಾಡ್ಜ್‌ನಲ್ಲಿ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಭಳ್ಳಿಯ ಭವಾನಿ ನಗರ ನಿವಾಸಿಯಾದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಯನ್ನು ಅವರು ಟೆಂಡರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.
ಹುಬ್ಬಳ್ಳಿಯಿಂದ ಭಾನುವಾರ ಬೆಳಿಗ್ಗೆ ಪಟ್ಟಣಕ್ಕೆ ಬಂದಿದ್ದ ಆನಂದ, ದಾಕ್ಷಾಯಣಿ ಲಾಡ್ಜ್‌ನಲ್ಲಿ ಕೊಠಡಿ ಪಡೆದು ತಂಗಿದ್ದರು.
ಸೋಮವಾರ ಬೆಳಿಗ್ಗೆ ಕುಟುಂಬದವರು ಅನೇಕ ಬಾರಿ ಕರೆ ಮಾಡಿದರೂ ಸ್ವೀಕರಿಸದೇ ಇದ್ದಾಗ ಲಾಡ್ಜ್ ಸ್ವಾಗತಕಾರರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೊಠಡಿಯ ಬಾಗಿಲು ತಟ್ಟಿದರೂ ತೆರೆಯದೇ ಇದ್ದಾಗ ಲಾಡ್ಜ್ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೂಂ ತೆರೆಸಿದಾಗ ಕಿಟಕಿಯ ಸರಳಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ.
‘ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಆಗಮಿಸಿ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಆನಂದ ಹಾಗೂ ಸ್ನೇಹಿತರಾದ ಸುಧೀಂದ್ರ, ಗೌರೀಶ ಅವರು ಪಾಲುದಾರಿಕೆಯಲ್ಲಿ ಕಂಪನಿಯೊಂದನ್ನು ಸ್ಥಾಪಿಸಿ, ಅದರ ಹೆಸರಲ್ಲಿ ಟೆಂಡರ್‌ಗಳನ್ನು ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.