ADVERTISEMENT

ಲಂಬಾಣಿ ತಾಂಡಾಗಳಲ್ಲಿ ಮತಾಂತರ ಯತ್ನ: ಮುತಾಲಿಕ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 16:17 IST
Last Updated 19 ಫೆಬ್ರುವರಿ 2024, 16:17 IST
ಪ್ರಮೋದ್‌ ಮುತಾಲಿಕ್
ಪ್ರಮೋದ್‌ ಮುತಾಲಿಕ್   

ಹೊಸಪೇಟೆ: ‘ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದೆ’ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಎಚ್ಚರಿಸಿದ್ದಾರೆ.

ಇಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಿಮ್ಮ ಯಾವುದೇ ರೀತಿಯ ಭಜನೆ, ಪ್ರಾರ್ಥನೆ ಚರ್ಚ್‌ ಒಳಗೆ ಇರಲಿ, ಹೊರಗಡೆ, ತಾಂಡಾಗಳಲ್ಲಿ ಮೋಸ ಮಾಡಿ ನೀವು ಮಾಡುವ ಕೆಲಸವನ್ನು ಏಸು ಒಪ್ಪುವುದಿಲ್ಲ’ ಎಂದು ಆಕ್ಷೇಪಿಸಿದರು.

‘ತಾಂಡಾಗಳ ಬಡತನ, ಅನಕ್ಷರತೆಯನ್ನು ಬಳಸಿಕೊಂಡು, ಅವರಿಗೆ ಆಸೆ ತೋರಿಸಿ ಮಾಡುವ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸಬೇಕು. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಲ್ಲಿದೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು’ ಎಂದು ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.