ADVERTISEMENT

ಕೊರೊನಾ ಮೂರನೇ ಅಲೆಯ ಆತಂಕ; ತುಂಗಭದ್ರಾ ಜಲಾಶಯ ಪ್ರವೇಶಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 15:57 IST
Last Updated 4 ಆಗಸ್ಟ್ 2021, 15:57 IST

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ ಬುಧವಾರ ಸಂಜೆ ಆದೇಶ ಹೊರಡಿಸಿದ್ದಾರೆ.

‘ನೆರೆಯ ರಾಜ್ಯಗಳು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆಯಾಗುತ್ತಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಇತ್ತೀಚೆಗೆ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ದಿನನಿತ್ಯ ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನ ಅಣೆಕಟ್ಟೆ ವೀಕ್ಷಣೆಗೆ ಬರುತ್ತಿದ್ದಾರೆ. ಒಂದೆಡೆ ಹೆಚ್ಚಿನ ಜನ ಸೇರುತ್ತಿದ್ದಾರೆ. ಕೊರೊನಾ ಮೂರನೇ ಅಲೆಯ ಬಗ್ಗೆ ಈಗಾಗಲೇ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಜನ ಗುಂಪು ಗುಂಪಾಗಿ ಸೇರುವುದನ್ನು ತಡೆಯುವುದು ಈ ಸಂದರ್ಭದ ಮೊದಲ ಆದ್ಯತೆಯಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.