ADVERTISEMENT

ಮಾಸ್ಕ್‌ ಧರಿಸದವರಿಗೆ ದಂಡದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 9:45 IST
Last Updated 18 ಏಪ್ರಿಲ್ 2021, 9:45 IST
ತಹಶೀಲ್ದಾರ್‌ ಎಚ್. ವಿಶ್ವನಾಥ್‌, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ಕಂದಾಯ ಇಲಾಖೆಯ ಇನ್‌ಸ್ಪೆಕ್ಟರ್‌ ಜಿ. ಮಲ್ಲಿಕಾರ್ಜುನಗೌಡ ಅವರು ಭಾನುವಾರ ಹೊಸಪೇಟೆಯ ಎಪಿಎಂಸಿಯಲ್ಲಿ ಮಾಸ್ಕ್‌ ಧರಿಸದವರಿಗೆ ಎಚ್ಚರಿಕೆ ನೀಡಿದರು
ತಹಶೀಲ್ದಾರ್‌ ಎಚ್. ವಿಶ್ವನಾಥ್‌, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ಕಂದಾಯ ಇಲಾಖೆಯ ಇನ್‌ಸ್ಪೆಕ್ಟರ್‌ ಜಿ. ಮಲ್ಲಿಕಾರ್ಜುನಗೌಡ ಅವರು ಭಾನುವಾರ ಹೊಸಪೇಟೆಯ ಎಪಿಎಂಸಿಯಲ್ಲಿ ಮಾಸ್ಕ್‌ ಧರಿಸದವರಿಗೆ ಎಚ್ಚರಿಕೆ ನೀಡಿದರು   

ಹೊಸಪೇಟೆ (ವಿಜಯನಗರ): ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ತಡೆಯಲು ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರು ಭಾನುವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸೋಗಿ ಮಾರುಕಟ್ಟೆಗೆ ಭೇಟಿ ನೀಡಿದರು.

‘ವ್ಯಾಪಾರಿಗಳು ಅಂತರ ಕಾಯ್ದುಕೊಂಡು ತರಕಾರಿ, ಹಣ್ಣು ಮಾರಾಟ ಮಾಡಬೇಕು. ಜನ ಒಂದೆಡೆ ಗುಂಪು ಗುಂಪಾಗಿ ಸೇರದಂತೆ ನೋಡಿಕೊಳ್ಳಬೇಕು. ಸ್ವಚ್ಛತೆ ಕಾಯ್ದುಕೊಳ್ಳಬೇಕು. ವ್ಯಾಪಾರಿಗಳು, ಜನರು ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕು. ಒಂದುವೇಳೆ ಮಾಸ್ಕ್‌ ಧರಿಸದೆ ಮಾರುಕಟ್ಟೆಗೆ ಬಂದರೆ ಅಂತಹವರಿಗೆ ದಂಡ ಹೇರಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಕಂದಾಯ ಇಲಾಖೆಯ ಇನ್‌ಸ್ಪೆಕ್ಟರ್‌ ಜಿ. ಮಲ್ಲಿಕಾರ್ಜುನಗೌಡ, ನಗರಸಭೆ ಹಾಗೂ ಪೊಲೀಸ್‌ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.