ADVERTISEMENT

ಹೊಸಪೇಟೆ: ಕೋವಿಡ್‌ ಸಹಾಯ ಹಸ್ತ ಅಭಿಯಾನ ಆರಂಭ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 10:57 IST
Last Updated 18 ಜುಲೈ 2021, 10:57 IST
ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಹಾಗೂ ಮುಖಂಡರು ಭಾನುವಾರ ಹೊಸಪೇಟೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು
ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಹಾಗೂ ಮುಖಂಡರು ಭಾನುವಾರ ಹೊಸಪೇಟೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು   

ಹೊಸಪೇಟೆ (ವಿಜಯನಗರ): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿರುವ ಕೋವಿಡ್‌–19 ಸಹಾಯ ಹಸ್ತ ಅಭಿಯಾನ ಭಾನುವಾರ ನಗರದಲ್ಲಿ ಆರಂಭಗೊಂಡಿತು.

ಕೋವಿಡ್‌ನಿಂದ ಮೃತಪಟ್ಟವರ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ಕಳುಹಿಸಿಕೊಡುವುದು ಅಭಿಯಾನದ ಮುಖ್ಯ ಉದ್ದೇಶ.

ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಅವರು ನಗರದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ, ‘ಕೋವಿಡ್‌ನಿಂದ ಸಂಬಂಧಿಕರನ್ನು ಕಳೆದುಕೊಂಡವರ ಮನೆಗಳಿಗೆ ಭೇಟಿ ನೀಡಿ, ಅವರಿಗೆ ಸಾಂತ್ವನ ಹೇಳಲಾಗುತ್ತಿದೆ. ಅವರ ಮಾಹಿತಿ ಸಂಗ್ರಹಿಸಿ, ಕೆಪಿಸಿಸಿಗೆ ಕಳುಹಿಸಿಕೊಡಲಾಗುತ್ತದೆ. ಮೃತರ ಕುಟುಂಬದವರಿಗೆ ಪರಿಹಾರ ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು’ ಎಂದು ತಿಳಿಸಿದರು.

ADVERTISEMENT

ನಗರದ ಚಿತ್ತವಾಢ್ಗಿ, ಆಶ್ರಯ ಕಾಲೊನಿ, ಕಾರಿಗನೂರು, ಪಟೇಲ್‌, ತಾಲ್ಲೂಕಿನ ಕೊಂಡನಾಯಕನಹಳ್ಳಿಗೆ ಕಾರ್ಯಕರ್ತರು ತೆರಳಿ ಮಾಹಿತಿ ಸಂಗ್ರಹಿಸಿದರು.

ಮುಖಂಡರಾದ ರಾಮನಗೌಡ, ಎಸ್.ಬಿ.ಮಂಜುನಾಥ್, ತೇಜಾನಾಯ್ಕ್, ಯಂಕೋಬಪ್ಪ, ಜಿ.ರಘು, ಡಿ.ಕುಬೇರ, ಅಬ್ದುಲ್ ರೌಫ್, ವಿಜಯ ಕುಮಾರ್, ಇಂದುಮತಿ, ಸೋಮಪ್ಪ, ಅಸ್ಲಂ ಮಾಳಗಿ, ನನ್ನೆಬೀ, ಅಣ್ಣಾಮಲೈ, ನವಾಜ್, ಗಾಳೆಪ್ಪ, ಗಂಗಮ್ಮ, ಗೀತಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.