ಹೊಸಪೇಟೆ (ವಿಜಯನಗರ): ನಗರದ 58 ವರ್ಷದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಶಂಕೆ ಇದ್ದು, ಐಎಲ್‌ಐ, ಸಾರಿ ಪ್ರಕರಣಗಳ ಮೇಲೆ ನಿಗಾ ಇರಿಸಲು ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ), ಸಮುದಾಯ ಆರೋಗ್ಯ ಕೇಂದ್ರಗಳು (ಸಿಎಚ್‌ಸಿ) ಹಾಗೂ ಸಾರ್ವಜನಿಕ ಆಸ್ಪತ್ರೆಗಳಿಗೆ ಸೂಚನೆ ರವಾನಿಸಿದೆ.
ಜಿಲ್ಲೆಯಲ್ಲಿ 47 ಪಿಎಚ್‌ಸಿಗಳು, ಏಳು ಸಿಎಚ್‌ಸಿಗಳು, ಮೂರು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇದೆ. ಐಎಲ್ಐ, ಸಾರಿ ಪ್ರಕರಣಗಳು ದಾಖಲಾದರೆ ನಿಗಾ ಇಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ಸೂಚನೆ ನೀಡಿದ್ದಾರೆ.
ಈ ಮಧ್ಯೆ, ತಾಲ್ಲೂಕಿನ ಕಮಲಾಪುರದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಲು ಬಂದಿದ್ದ ಶಾಸಕ ಎಚ್.ಆರ್.ಗವಿಯಪ್ಪ ಅವರು ಡಿಎಚ್‌ಒ ಅವರಿಗೆ ಕರೆ ಮಾಡಿ ಕೊರೊನಾ ಸ್ಥಿತಿಗತಿ ಬಗ್ಗೆ ವಿಚಾರಿಸಿದರು.
‘ಕೊರೊನಾ ಪ್ರಸರಣ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಶಂಕಿತ ಕೊರೊನಾ ಪೀಡಿತೆಗೆ ಉತ್ತಮ ಆರೈಕೆ ನೀಡಿ’ ಎಂದು ಶಾಸಕರು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.