ಹೊಸಪೇಟೆ (ವಿಜಯನಗರ): ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಾಪುರದಲ್ಲಿ ವಿವಿಧ ಕಂಪನಿಗಳ 106 ಲೀಟರ್ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟುಕೊಂಡಿದ್ದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ₹43,985 ಮೌಲ್ಯದ ಮದ್ಯ ಜಪ್ತಿ ಮಾಡಿಕೊಂಡಿದ್ದಾರೆ.
ಆರೋಪಿ ಸಂಕ್ಲಾಪುರ ತಾಂಡಾದ ಮಂಜು ನಾಯ್ಕ ತನ್ನ ಮನೆಯಲ್ಲಿ ಈ ಮದ್ಯವನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದ ಎಂದು ಎಸ್‌ಪಿ ಶ್ರೀಹರಿಬಾಬು ಬಿ.ಎಲ್.ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಗ್ರಾಮೀಣ ಠಾಣೆ ಇನ್‌ಸ್ಟೆಕ್ಟರ್ ಗುರುರಾಜ್ ಆರ್.ಕಟ್ಟಿಮನಿ, ಎಎಸ್‌ಐ ವಿ.ರಾಘವೇಂದ್ರ, ಮಂಜುನಾಥ ಮೇಟಿ, ಎ.ಪಂಪಾಪತಿ, ಕೆ.ಹಾಲೇಶ್, ನಾಗರಾಜ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.