ADVERTISEMENT

ವಿಜಯನಗರ: ಹಾಡಹಗಲೇ ಮನೆ ಬೀಗ ಮುರಿದು ₹10 ಲಕ್ಷ ನಗದು ಕಳ್ಳತನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 14:03 IST
Last Updated 22 ನವೆಂಬರ್ 2025, 14:03 IST
   

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಪಟ್ಟಣದ ವಿಜಯನಗರ ಬಡಾವಣೆಯಲ್ಲಿ (ರಾಮಸ್ವಾಮಿ ಪ್ಲಾಟ್) ಶನಿವಾರ ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳರು ₹10 ಲಕ್ಷ ನಗದು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸೈನಿಕ ಕೆ. ದೇವೇಂದ್ರಪ್ಪ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಳಿಗ್ಗೆ ಮನೆಗೆ ಬೀಗ ಹಾಕಿ ಕುಟುಂಬದ ಸದಸ್ಯರೆಲ್ಲ ಹುಲಿಗುಡ್ಡ ಹತ್ತಿರದ ಹೊಲಕ್ಕೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಕಪಾಟಿನಲ್ಲಿದ್ದ ₹10 ಲಕ್ಷ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಡಿವೈಎಸ್ಪಿ ಸಂತೋಷ ಚವ್ಹಾಣ್, ಸಿಪಿಐ ದೀಪಕ್ ಬೂಸರೆಡ್ಡಿ, ಪಿಎಸ್ಐ ಮಣಿಕಂಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ‘ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದು, ಕಳ್ಳರನ್ನು ಪತ್ತೆ ಹಚ್ಚುತ್ತೇವೆ’ ಎಂದು ಪಿಎಸ್ಐ ಮಣಿಕಂಠ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.