ADVERTISEMENT

ಅವಳಿ ಜಿಲ್ಲೆಗಳಲ್ಲಿ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆಸಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 14:14 IST
Last Updated 13 ಏಪ್ರಿಲ್ 2022, 14:14 IST

ಹೊಸಪೇಟೆ (ವಿಜಯನಗರ): ಏ. 22ರಿಂದ ಮೇ 18ರ ವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಅದಕ್ಕಾಗಿ ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ 34 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.

ವಿಜಯನಗರದಲ್ಲಿ 18, ಬಳ್ಳಾರಿ ಜಿಲ್ಲೆಯ 16 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ. ಪರೀಕ್ಷೆ ಸಿದ್ಧತೆ ಕುರಿತು ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ., ಬಳ್ಳಾರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ ಅಧಿಕಾರಿಗಳ ಸಭೆ ನಡೆಸಿ, ಸುಸೂತ್ರವಾಗಿ ಪರೀಕ್ಷೆ ನಡೆಸಿಕೊಂಡು ಹೋಗಬೇಕೆಂದು ಸೂಚನೆ ನೀಡಿದರು.

‘ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಪವಿಭಾಗಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಖಜಾನೆ ಅಧಿಕಾರಿಗಳು, ತಹಶೀಲ್ದಾರರು, ಎಲ್ಲಾ ಬಿಇಒ/ಬಿಆರ್‌ಸಿ, ಪ್ರಾಚಾರ್ಯರು/ಹಿರಿಯ ಉಪನ್ಯಾಸಕರು ಹಾಗೂ ಪರೀಕ್ಷಾ ಕೇಂದ್ರಗಳ ಸೂಪರಿಟೆಂಡೆಂಟ್‌ಗಳು, ಸಿಬ್ಬಂದಿ ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಆಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.