ADVERTISEMENT

ಹಗರಿಬೊಮ್ಮನಹಳ್ಳಿ: ಅನುಮಾನಾಸ್ಪದ ಸಾವು- ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 4:26 IST
Last Updated 3 ನವೆಂಬರ್ 2022, 4:26 IST
   

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ‌ ಹಂಪಾಪಟ್ಟಣ ಗ್ರಾಮದ ಸೊಪ್ಪಿನವರ ಚೌಡಪ್ಪ(42) ಅನುಮಾನಾಸ್ಪದ ರೀತಿಯಲ್ಲಿ ಗುರುವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.

ಗ್ರಾಮದಿಂದ ವರದಾಪುರಕ್ಕೆ ತೆರಳುವ ರಸ್ತೆಯಲ್ಲಿ ಶವ ಬಿದ್ದಿದೆ. ತಲೆಗೆ ತೀವ್ರ ಪೆಟ್ಟಾಗಿದ್ದು, ಕೊಲೆಯಾಗಿರಬಹುದು ಎಂದು ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮರಿಮಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT