ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಶಿವಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ಬೆಳಗಿನ ಜಾವ ಐದು ಗಂಟೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಜಿನಿಯರ್ ಅಮರ್ ಬಿರಾದಾರ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಡೊಂಗರಗಿ ಗ್ರಾಮದ ನಿವಾಸಿಯಾಗಿದ್ದ ಅಮರ್, ಬೆಂಗಳೂರಿನಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಒಂದುವರೆ ತಿಂಗಳ ಹಿಂದೆ ಮದುವೆಯಾಗಿದ್ದರು. ಪತ್ನಿಯನ್ನು ಕರೆತರಲು ಶನಿವಾರ ರಾತ್ರಿ ಸ್ವತಃ ಅವರೇ ಕಾರು ಓಡಿಸಿಕೊಂಡು ಸ್ವಗ್ರಾಮಕ್ಕೆ ಹೊರಟಿದ್ದರು. ಭಾನುವಾರ ನಸುಕಿನಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಅಮರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿ, ಅವರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.