ಹೊಸಪೇಟೆ (ವಿಜಯನಗರ): ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ್ದರ ಪ್ರಯುಕ್ತ ನಗರದಲ್ಲಿ ಮಂಗಳವಾರ ಸಮರ್ಪಣಾ ಸಂಕಲ್ಪ ಸಮಾವೇಶ ಏರ್ಪಡಿಸಿ, ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಆತಿಥೇಯ ಕ್ಷೇತ್ರದ ಶಾಸಕ ಎಚ್.ಆರ್.ಗವಿಯಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂಬಂಧ ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನನ್ನ ಕ್ಷೇತ್ರದಲ್ಲಿ ಇಂತಹ ಬೃಹತ್ ಸಮಾವೇಶ ನಡೆದಿರುವುದು ನನ್ನ ಸೌಭಾಗ್ಯವೇ ಸರಿ, ಇದರಿಂದ ನನ್ನ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಇನ್ನಷವಟು ಮಾಡಲು ಹೊಸ ಹುರುಪು ಮತ್ತು ಚೈತನ್ಯ ತುಂಬಿದೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಸಿಎಂ, ಡಿಸಿಎಂ, ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯ ಕಾರ್ಯದರ್ಶಿ ಸಹಿತ ಸಮಾವೇಶ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ಪ್ರತ್ಯೇಕವಾಗಿ ಕೃತಜ್ಞತೆ ಸಲ್ಲಿಸಿರುವ ಅವರು, ತಮ್ಮ ಶಾಸಕತ್ವ ಅವಧಿಯಲ್ಲೇ ಇಂದಿರಾ ಗಾಂಧಿ ಅವರ ಪ್ರತಿಮೆ ಅನಾವರಣದ ಅವಕಾಶ ಸಿಕ್ಕಿದ್ದಕ್ಕೂ ಖುಷಿಪಟ್ಟಿದ್ದಾರೆ. ‘ನಿಮ್ಮೆಲ್ಲರ ಪ್ರೀತಿ, ಸ್ನೇಹ, ಅಭಿಮಾನ ನನ್ನ, ನನ್ನ ಕುಟುಂಬ ಹಾಗೂ ಪಕ್ಷದ ಮೇಲಿರಲಿ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.