ADVERTISEMENT

ದೆಹಲಿ ಸ್ಫೋಟ; ಮೋದಿ ಅವರು ಪರಿಸ್ಥಿತಿ ನಿಭಾಯಿಸಲಿದ್ದಾರೆ: ಕಾಂಗ್ರೆಸ್ ಶಾಸಕ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 0:12 IST
Last Updated 14 ನವೆಂಬರ್ 2025, 0:12 IST
ಎಚ್‌.ಆರ್‌. ಗವಿಯಪ್ಪ
ಎಚ್‌.ಆರ್‌. ಗವಿಯಪ್ಪ   

ಹೊಸಪೇಟೆ (ವಿಜಯನಗರ): 'ಕೆಂಪುಕೋಟೆ ಬಳಿ ಬಾಂಬ್ ಸ್ಫೋಟದಂತಹ ಘಟನೆ ನಡೆಯಬಾರದಿತ್ತು. ಕಳೆದ ಹತ್ತು ವರ್ಷಗಳಲ್ಲಿ ಇಂತಹ  ಕಾರು ಬಾಂಬ್‌ ಸ್ಫೋಟ ಸಂಭವಿಸಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿ ನಿಭಾಯಿಸುವರು ಎಂಬ ವಿಶ್ವಾಸವಿದೆ’ ಎಂದು ಕಾಂಗ್ರೆಸ್ ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ದೇಶವನ್ನು ರಕ್ಷಿಸುವರು ಎಂಬ ಭರವಸೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT