ADVERTISEMENT

ಅರ್ಹರಿಗೆ ಆಶ್ರಯ ಮನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 11:16 IST
Last Updated 9 ಫೆಬ್ರುವರಿ 2022, 11:16 IST
ಆಶ್ರಯ ಕಾಲೊನಿಯ ನಿವಾಸಿಗಳು ಬುಧವಾರ ಹೊಸಪೇಟೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು
ಆಶ್ರಯ ಕಾಲೊನಿಯ ನಿವಾಸಿಗಳು ಬುಧವಾರ ಹೊಸಪೇಟೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ನಗರದ ಆಶ್ರಯ ಕಾಲೊನಿಯಲ್ಲಿ ನಿರ್ಮಿಸಿರುವ ಆಶ್ರಯ ಮನೆಗಳು ನಕಲಿ ಫಲಾನುಭವಿಗಳ ಪಾಲಾಗಿದ್ದು, ಅರ್ಹರಿಗೆ ವಿತರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನಗರಸಭೆಯ 22ನೇ ವಾರ್ಡಿನ ಸರ್ವೇ ನಂಬರ್‌ 1,2,3 ಮತ್ತು 4ಕ್ಕೆ ಸಂಬಂಧಿಸಿದ ಆಶ್ರಯ ಮನೆಗಳನ್ನು ಹಂಚಿಕೆ ಮಾಡಲಾಗಿದ್ದು ನೈಜ ಫಲಾನುಭವಿಗಳಿಗೆ ಹಕ್ಕು ಪತ್ರ ಸಿಕ್ಕಿಲ್ಲ. ನಕಲಿ ದಾಖಲೆ ಪತ್ರ ಸೃಷ್ಟಿಸಿಕೊಂಡು ಹಲವರು ವಾಮಮಾರ್ಗದಿಂದ ಹಕ್ಕು ಪತ್ರ ಪಡೆದುಕೊಂಡಿದ್ದಾರೆ ಎಂದು ಬುಧವಾರ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿಗಳು ಈ ಕುರಿತು ಸಮಗ್ರ ತನಿಖೆ ನಡೆಸಿ, ಅರ್ಹರಿಗೆ ಆದಷ್ಟು ಶೀಘ್ರ ಹಕ್ಕು ಪತ್ರ ಕೊಡಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎ. ಶರೀಫ್‌, ಮಂಜುನಾಥ, ಹೊನ್ನೂರಪ್ಪ, ದುರಗಪ್ಪ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.