ADVERTISEMENT

ಮೂಲ ಸೌಕರ್ಯ ದುರಸ್ತಿಗೆ ಅಹಿಂದ ವೇದಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 12:47 IST
Last Updated 3 ಜೂನ್ 2021, 12:47 IST
ಅಹಿಂದ ಯುವ ವೇದಿಕೆಯ ಮುಖಂಡರು ಹೊಸಪೇಟೆಯಲ್ಲಿ ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಅಹಿಂದ ಯುವ ವೇದಿಕೆಯ ಮುಖಂಡರು ಹೊಸಪೇಟೆಯಲ್ಲಿ ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ(ವಿಜಯನಗರ): ನಗರದ ವಿವಿಧ ಬಡಾವಣೆಗಳು ಮೂಲಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ಕಲ್ಪಿಸಲು ನಗರಸಭೆ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಯುವ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ಮುಖಂಡರು ಗುರುವಾರ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ನಗರದ 32ನೇ ವಾರ್ಡ್, ಏಳು ಮಕ್ಕಳ ತಾಯಮ್ಮ ದೇವಸ್ಥಾನದ ಏರಿಯಾ ಹಾಗೂ ಮೇದಾರ್ ರಸ್ತೆಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಇರುವ ಬೋರ್‌ವೆಲ್‌ನ ಮೋಟಾರ್ ಸುಟ್ಟಿರುವುದರಿಂದ ಸ್ಥಳೀಯರು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಬಳ್ಳಾರಿ ದುರುಗಮ್ಮ ದೇವಸ್ಥಾನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್‌ ಅಳವಡಿಸುವ ಸಂದರ್ಭದಲ್ಲಿ ರಸ್ತೆ ಹಾಳಾಗಿದೆ. ಆದಷ್ಟು ಬೇಗನೆ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ‌ವೇದಿಕೆಯ ತಾಲ್ಲೂಕು ಅಧ್ಯಕ್ಷ ಕುಬೇರ ದಲ್ಲಾಳಿ, ಉಪಾಧ್ಯಕ್ಷ ಕೇಶವ.ಕೆ, ದೇವರಾಜ್, ಖಾಜಾ ಹುಸೇನ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.