ADVERTISEMENT

ಹೊಸಪೇಟೆ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಬಿಡುಗಡೆಗೆ ಎಐಡಿವೈಒ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 9:28 IST
Last Updated 28 ಜೂನ್ 2022, 9:28 IST
ಪಂಪಾಪತಿ
ಪಂಪಾಪತಿ    

ಹೊಸಪೇಟೆ (ವಿಜಯನಗರ): ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ‘ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಯುತ್‌ ಆರ್ಗನೈಜೇಶನ್‌’ (ಎಐಡಿವೈಒ) ಜಿಲ್ಲಾ ಕಾರ್ಯದರ್ಶಿ ಪಂಪಾಪತಿ ಆಗ್ರಹಿಸಿದ್ದಾರೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ತೀಸ್ತಾ ಸೆಟಲ್‌ವಾಡ್‌ ಅವರನ್ನು ಬಂಧನಗೊಳಿಸಿದ್ದು ಖಂಡನಾರ್ಹ. ಗುಜರಾತ್‌ ಸರ್ಕಾರವು ಪ್ರತೀಕಾರದ ಕ್ರಮವಾಗಿ ತೀಸ್ತಾ ಅವರನ್ನು ಬಂಧಿಸಿದೆ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಮಂಗಳವಾರ ಇಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.