ಹಗರಿಬೊಮ್ಮನಹಳ್ಳಿ: ಪಟ್ಟಣದ ಜಿವಿಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್.ಎಫ್.ಐ) ತಾಲ್ಲೂಕು ಘಟಕದಿಂದ ಪ್ರಾಂಶುಪಾಲ ಕೆ.ವೆಂಕಟೇಶ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಒಕ್ಕೂಟದ ಕಾರ್ಯದರ್ಶಿ ಜಯಸೂರ್ಯ ಮಾತನಾಡಿ, ‘ತಾಲ್ಲೂಕಿನಲ್ಲಿ 5ಸಾವಿರಕ್ಕೂ ಹೆಚ್ಚು ಪದವೀಧರ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಬಳ್ಳಾರಿ, ಕೊಪ್ಪಳ, ದಾವಣಗೆರೆ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯ ಇದೆ. ಇದರಿಂದಾಗಿ ತಾಲ್ಲೂಕಿನ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ’ ಎಂದು ತಿಳಿಸಿದರು.
ವಿದ್ಯಾರ್ಥಿ ಮುಖಂಡರಾದ ಹುಲುಗಪ್ಪ, ಮೂರ್ತಿ, ಮಹೇಶ್, ದುರುಗೇಶ್, ವಿಶ್ವನಾಥ, ಚಂದ್ರಶೇಖರ್, ಪ್ರಜ್ವಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.