ADVERTISEMENT

ಏತ ನೀರಾವರಿ ತ್ವರಿತ ಪೂರ್ಣಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 12:20 IST
Last Updated 26 ಏಪ್ರಿಲ್ 2022, 12:20 IST
ರೈತ ಸಂಘದ ಕಾರ್ಯಕರ್ತರು ಮಂಗಳವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು
ರೈತ ಸಂಘದ ಕಾರ್ಯಕರ್ತರು ಮಂಗಳವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಏತ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ (ಪ್ರೊ.ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಮಂಗಳವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು‌.

ಏತ ನೀರಾವರಿ ಯೋಜನೆ ಕುಂಠಿತಗೊಂಡಿದೆ. ತ್ವರಿತ ಗತಿಯಲ್ಲಿ ಮುಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ, ಈ ಬಗ್ಗೆ ಮುಖ್ಯಮಂತ್ರಿಗಳು ಗಮನಹರಿಸಬೇಕು. ಭತ್ತ, ರಾಗಿ, ಜೋಳ ಹಾಗೂ ಮುಸುಕಿನ ಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿ, ಖರೀದಿಸಬೇಕು. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದೇ ಫಲಾನುಭವಿಗಳಿಗೆ ವಿಧಿಸಿರುವ ವಿದ್ಯುತ್ ದರವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಗಂಟೆ ಸೋಮಶೇಖರ್, ಎಂ.ಜಂಬಯ್ಯ ನಾಯಕ, ದಮ್ಮೂರು ಮಹೇಶ, ಅಯ್ಯಾಳಿ ಸ್ವಾಮಿ, ಜಯಪ್ಪ, ಜಿ.ಕೆ.ವೆಂಕಟೇಶ್ ಇದ್ದರು‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.