ADVERTISEMENT

ಪರಿಶಿಷ್ಟರ ರಕ್ಷಣೆಗೆ ಹಕ್ಕೊತ್ತಾಯ

​ಪ್ರಜಾವಾಣಿ ವಾರ್ತೆ
Published 31 ಮೇ 2021, 8:57 IST
Last Updated 31 ಮೇ 2021, 8:57 IST
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆಯ ಮುಖಂಡರು ಸೋಮವಾರ ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆಯ ಮುಖಂಡರು ಸೋಮವಾರ ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಆಗ್ರಹಿಸಿದೆ.ವೇದಿಕೆಯು ಈ ಸಂಬಂಧ ಸೋಮವಾರ ನಗರದಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದೆ.

ಕೋವಿಡ್‌ ಸಂಕಷ್ಟದ ಪರಿಸ್ಥಿತಿಯಲ್ಲೂ ರಾಜ್ಯದಲ್ಲಿ ನಿರಂತರವಾಗಿ ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯಗಳು ಮುಂದುವರೆದಿವೆ. ಇತ್ತೀಚೆಗೆ ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ ನಡೆಸಲಾಗಿದೆ. ಹೀಗೆ ರಾಜ್ಯದ ವಿವಿಧ ಭಾಗಗಳಲ್ಲಿ ಈ ರೀತಿಯ ಪ್ರಕರಣಗಳು ಜರುಗುತ್ತಿವೆ. ಆದರೆ, ಸರ್ಕಾರ ಅವುಗಳನ್ನು ತಡೆಯುತ್ತಿಲ್ಲ. ಪರಿಶಿಷ್ಟರಿಗೆ ರಾಜ್ಯದಲ್ಲಿ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪರಿಶಿಷ್ಟ ಜಾತಿಯವರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು. ಲಾಕ್‌ಡೌನ್‌ನಲ್ಲಿ ಅವರು ಎದುರಿಸುತ್ತಿರುವ ಸಂಕಷ್ಟ ಅರಿತು ಅವರಿಗೆ ನೆರವಾಗಬೇಕು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಆ ಇಲಾಖೆಯ ಉನ್ನತ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಮುಖಂಡರಾದ ಕರಿಯಪ್ಪ ಗುಡಿಮನಿ, ಹನುಮಂತಪ್ಪ, ನಲ್ಲೂಡಿ ಹುಲಗಪ್ಪ, ಲಕ್ಷ್ಮಣ ಕಾರಿಗನೂರ, ರಾಮಚಂದ್ರ, ಶಿವುಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.