ADVERTISEMENT

‘ಐಎಸ್‌ಆರ್ ಆರಂಭಿಸದಿದ್ದರೆ ಹೋರಾಟ’

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2022, 13:16 IST
Last Updated 8 ಮಾರ್ಚ್ 2022, 13:16 IST

ಹೊಸಪೇಟೆ (ವಿಜಯನಗರ): ‘ನಗರದ ಐಎಸ್‌ಆರ್ ಸಕ್ಕರೆ ಕಾರ್ಖಾನೆ ಮುಚ್ಚಿರುವುದರಿಂದ ಕಬ್ಬು ಬೆಳೆಗಾರರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಬೇಗ ಕಾರ್ಖಾನೆ ಆರಂಭಿಸದಿದ್ದರೆ ಹೋರಾಟ ಆರಂಭಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಖಾನೆ ಆರಂಭಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಖಾಸಗಿ ಸಂಸ್ಥೆಗೆ ವಹಿಸಿ ಕಾರ್ಖಾನೆ ಆರಂಭಿಸಬೇಕು. ರೈತರು ಕೋಪಗೊಂಡು ಹೋರಾಟಕ್ಕೆ ಇಳಿಯುವ ಮುನ್ನ ಆದಷ್ಟು ಬೇಗ ಸೂಕ್ತ ನಿರ್ಧಾರ ತಿಳಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್, ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಟಿ.ನಾಗರಾಜ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.