ADVERTISEMENT

ಹೊಸಪೇಟೆ: ಸರ್ಕಾರಿ ಆಸ್ಪತ್ರೆ ವೈದ್ಯರ ಸನ್ಮಾನ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 16:35 IST
Last Updated 1 ಜುಲೈ 2021, 16:35 IST
ಜನನಿ ಮಹಿಳಾ ಸಬಲೀಕರಣ ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ ಅವರು ಗುರುವಾರ ಹೊಸಪೇಟೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ಅವರನ್ನು ಸನ್ಮಾನಿಸಿದರು
ಜನನಿ ಮಹಿಳಾ ಸಬಲೀಕರಣ ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ ಅವರು ಗುರುವಾರ ಹೊಸಪೇಟೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ಅವರನ್ನು ಸನ್ಮಾನಿಸಿದರು   

ಹೊಸಪೇಟೆ (ವಿಜಯನಗರ): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಜನನಿ ಮಹಿಳಾ ಸಬಲೀಕರಣ ಸಮಿತಿಯಿಂದ ಗುರುವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಸೇರಿದಂತೆ 15 ವೈದ್ಯರನ್ನು ಸತ್ಕರಿಸಲಾಯಿತು.

ಕೋವಿಡ್‌ ಕೆಲಸದ ವೇಳೆ ಮೃತಪಟ್ಟ ವೈದ್ಯರಿಗೆ ಇದೇ ವೇಳೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜನನಿ ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಗೌರವ ಅಧ್ಯಕ್ಷೆ ರೇಖಾರಾಣಿ, ಉಪಾಧ್ಯಕ್ಷೆ ಗೀತಾ ಶಂಕರ್, ರೋಫಿಯಾ, ಕಾರ್ಯದರ್ಶಿ ರಾಜೇಶ್ವರಿ, ಸಂಚಾಲಕಿ ಸ್ವಾತಿ ಸಿಂಗ್, ಯುವ ಮುಖಂಡ ಸಂದೀಪ್ ಸಿಂಗ್, ಎನ್.ವೆಂಕಟೇಶ್, ಪ್ರಕಾಶ್ ಗುಡಿ, ಬಷೀರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.