ADVERTISEMENT

ಸಾರ್ವಜನಿಕರ ಅಲೆದಾಡಿಸದಿರಿ: ಶಾಸಕ ನೇಮರಾಜನಾಯ್ಕ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 14:06 IST
Last Updated 1 ಜುಲೈ 2025, 14:06 IST
ಕೊಟ್ಟೂರಿನ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೆ.ನೇಮರಾಜನಾಯ್ಕ ಪಹಣಿ ದಾಖಲೆಗಳ ಡಿಜಿಟಲೀಕರಣದ ಪ್ರತಿಯನ್ನು ಸಾರ್ವಜನಿಕರಿಗೆ ಸಾಂಕೇತಿಕವಾಗಿ ವಿತರಣೆ ಮಾಡಿದರು
ಕೊಟ್ಟೂರಿನ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೆ.ನೇಮರಾಜನಾಯ್ಕ ಪಹಣಿ ದಾಖಲೆಗಳ ಡಿಜಿಟಲೀಕರಣದ ಪ್ರತಿಯನ್ನು ಸಾರ್ವಜನಿಕರಿಗೆ ಸಾಂಕೇತಿಕವಾಗಿ ವಿತರಣೆ ಮಾಡಿದರು   

ಕೊಟ್ಟೂರು: ಕಂದಾಯ ಇಲಾಖೆ ಹೆಚ್ಚಿನ ಜನಸಂಪರ್ಕ ಹೊಂದಿರುವ ಇಲಾಖೆಯಾಗಿದ್ದು, ಎಲ್ಲಾ ಇಲಾಖೆಗಳಿಗೂ ಮಾತೃ ಇಲಾಖೆಯಾಗಿದೆ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ‘ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಾಗ ಸೌಜನ್ಯದಿಂದ ವರ್ತಿಸಿ, ಅಲೆದಾಡಿಸದೆ ಅವರ ಕೆಲಸಗಳನ್ನು ಮಾಡಿಕೊಡಿ’ ಎಂದರು.

ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಮೃತ್ಯುಂಜಯ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಿ.ಸಿದ್ಧಯ್ಯ, ತಹಶೀಲ್ದಾರ್ ಜಿ.ಕೆ. ಅಮರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಭೂಮಾಪನ ಇಲಾಖಾಧಿಕಾರಿ ವಿಜಯಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯೋಗೀಶ್ವರ ದಿನ್ನೆ, ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ, ದ್ಯಾವಮ್ಮ, ಕೊಟ್ರಮ್ಮ, ಸಿ.ಮ.ಗುರುಬಸವರಾಜ್ ಪಾಲ್ಗೊಂಡಿದ್ದರು.

ADVERTISEMENT

ನಿವೃತ್ತರಾದ ಉಪತಹಶೀಲ್ದಾರ್ ಕೆ.ನಾಗರಾಜ್ ಹಾಗೂ ಶಿರಸ್ತೇದಾರ ಲೀಲಾ ಅವರನ್ನು ಅಭಿನಂದಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.