ಹೊಸಪೇಟೆ (ವಿಜಯನಗರ): ಕಾಶ್ಮೀರದ ಪಹಲ್ಗಾಮ್ ಸಮೀಪದ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ವಿಜಯನಗರ ಜಿಲ್ಲಾ ಹಾಗೂ ಹೊಸಪೇಟೆ ತಾಲೂಕು ಘಟಕ ತೀವ್ರವಾಗಿ ಖಂಡಿಸಿದೆ.
‘ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿ ನಡೆಸಿದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ ಮತ್ತು ಅಧ್ಯಕ್ಷ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.