ADVERTISEMENT

ಡಿವೈಎಫ್‌ಐ ಕಾರ್ಯರ್ತರ ವಿರುದ್ಧ ಎಫ್‌ಐಆರ್–ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 16:29 IST
Last Updated 3 ಜನವರಿ 2024, 16:29 IST

ಹೊಸಪೇಟೆ (ವಿಜಯನಗರ): ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಡಿವೈಎಫ್‌ಐ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಿದ ಪೊಲೀಸರ ನೆಡೆಯನ್ನು ವಿಜಯನಗರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಮುಸ್ಲಿಂ ಮಹಿಳೆಯರ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿದ ಪ್ರಭಾಕರ ಭಟ್ಟರನ್ನು ಬಂಧಿಸಲು ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಸಂಘಟನೆಯ ಮುಂಖಂಡರ ಮೇಲೆ ಉಳ್ಳಾಲ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ ಹೇಳಿದ್ದಾರೆ.

ಕಲ್ಲಡ್ಕ ಅವರ ಮೇಲೆ ಎಫ್‌ಐಆರ್ ದಾಖಲಾದರೂ ಬಂಧಿಸದೆ ಸುಮ್ಮನಿರುವ ಸರ್ಕಾರದ ನಡೆ ಖಂಡನೀಯ ಎಂದಿರುವ ಅವರು, ಜಾತ್ಯತೀತ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪ್ರತಿಭಟನೆಗೆ ನಿರ್ಬಂಧ ವಿಧಿಸಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.