ಹೊಸಪೇಟೆ (ವಿಜಯನಗರ): ನಗರದ ಹೊಟೇಲ್ ಉದ್ಯಮಿಯೊಬ್ಬರ ಮನೆ, ಕಚೇರಿ ಮೇಲೆ ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಲ್ಲಿನ ರೈಲು ನಿಲ್ದಾಣ ರಸ್ತೆಯ ಹೋಟೆಲ್, ವಿನಾಯಕ ನಗರ ಮನೆ ಮತ್ತು ಬಸವೇಶ್ವರ ಬಡಾವಣೆಯ ಮನೆಯ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಗಣಿ ಗುತ್ತಿಗೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಈ ಉದ್ಯಮಿ ಅವರ ಲೆಕ್ಕಪತ್ರ ವ್ಯವಹಾರದಲ್ಲಿ ವ್ಯತ್ಯಾಸ ಕಂಡುಬಂದ ಕಾರಣ ಈ ದಾಳಿ ನಡೆದಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.