ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಶುಕ್ರವಾರ (ಜ.14) ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ತಿಳಿಸಿದ್ದಾರೆ.
ಜ. 14ರ ಬೆಳಿಗ್ಗೆ 6ರಿಂದ ಜ. 15ರ ಬೆಳಿಗ್ಗೆ 6ರ ವರೆಗೆ ಜಲಾಶಯಕ್ಕೆ ಅಲ್ಲಿನ ಸಿಬ್ಬಂದಿ ಹೊರತುಪಡಿಸಿ ಅನ್ಯರ ಪ್ರವೇಶ ನಿಷೇಧಿಸಲಾಗಿದೆ.
ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಬರುವ ನಿರೀಕ್ಷೆ ಇರುವುದರಿಂದ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.