ADVERTISEMENT

ನಕಲಿ ವೈದ್ಯಕೀಯ ಪ್ರಮಾಣಪತ್ರ ಪ್ರಕರಣ: ಎಫ್‌ಡಿಎ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 19:26 IST
Last Updated 19 ಸೆಪ್ಟೆಂಬರ್ 2025, 19:26 IST
<div class="paragraphs"><p>ಅಮಾನತು</p></div>

ಅಮಾನತು

   

ಹೊಸಪೇಟೆ (ವಿಜಯನಗರ): ‘ನಕಲಿ ದಾಖಲೆ ಸಲ್ಲಿಸಿ, ಅಂಗವಿಕಲ ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ನೆರವು ನೀಡಿದ್ದ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಉಮೇಶ್‌ ನಾಗಪ್ಪ ಚೌಧರಿಯನ್ನು ಅಮಾನತು ಮಾಡಲಾಗಿದೆ’ ಎಂದು ಡಾ.ಎಲ್‌.ಆರ್.ಶಂಕರ್ ನಾಯ್ಕ್ ತಿಳಿಸಿದರು.

‘ಪ್ರಕರಣ ಬೆಳಕಿಗೆ ಬಂದ ತಕ್ಷಣ ಸಮಗ್ರ ತನಿಖೆ ನಡೆಸಿ ಬೆಂಗಳೂರಿನ ಮಲ್ಲೇಶ್ವರ ಪೊಲೀಸ್‌ ಠಾಣೆ ತನಿಖಾಧಿಕಾರಿಗೆ ವರದಿ ಸಲ್ಲಿಸಿದ್ದೇನೆ. ಹಗರಿಬೊಮ್ಮನಹಳ್ಳಿಯಲ್ಲಿ 13 ಮತ್ತು ಹೊಸಪೇಟೆಯಲ್ಲಿ 7 ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ನೀಡಿದ್ದು ಗೊತ್ತಾಗಿದೆ’ ಎಂದು ಅವರು ಶುಕ್ರವಾರ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಉಮೇಶ್‌ ಮೊದಲು ಹೊಸಪೇಟೆಯಲ್ಲಿದ್ದು, ಜುಲೈ 9ರಂದು ಹಗರಿಬೊಮ್ಮನಹಳ್ಳಿಗೆ ವರ್ಗಾವಣೆಗೊಂಡಿದ್ದ. ಎರಡೂ ಕಡೆ ಆತನೇ ಯುಡಿಐಡಿ ಕಾರ್ಡ್‌ ವಿತರಣೆ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.