ಹೊಸಪೇಟೆ (ವಿಜಯನಗರ): ದಿವಂಗತ ನಟ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ನಗರದಲ್ಲಿರುವ ಅವರ ಪ್ರತಿಮೆ ಇರುವ ಸ್ಥಳಕ್ಕೆ ಬಂದು ಗೌರವ ಸಲ್ಲಿಸುತ್ತಿದ್ದಾರೆ.
ಜನ್ಮದಿನದ ಅಂಗವಾಗಿ ಬೆಳಿಗ್ಗೆ ಪುನೀತ್ ಅವರ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಮಾಲೆ ಹಾಕಿ ಪೂಜೆ ಸಲ್ಲಿಸಲಾಯಿತು. ವಿವಿಧ ಕಡೆಗಳಿಂದ ಅವರ ಅಭಿಮಾನಿಗಳು ಬಂದು ಮಾಲೆ ಹಾಕಿ, ಅವರ ಪ್ರತಿಮೆಗೆ ನಮಿಸಿ ಗೌರವ ಸಲ್ಲಿಸುತ್ತಿದ್ದಾರೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಸೆಲ್ಫಿ, ಛಾಯಾಚಿತ್ರ ತೆಗೆದುಕೊಳ್ಳುತ್ತಿದ್ದಾರೆ. ಸೋಗಿ ಮಾರುಕಟ್ಟೆ ಬಳಿ ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತಂಪು ಪಾನೀಯ ವಿತರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.