
ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯ ನಿರ್ಮಾಣದಿಂದ ನಿರಾಶ್ರಿತರಾದ, ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಬೇಕು ಎಂಬ ಬೇಡಿಕೆಯನ್ನು ಶೀಘ್ರ ಈಡೇರಿಸದಿದ್ದರೆ ಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪುಬಟ್ಟೆ ಪ್ರದರ್ಶನ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮರಿಯಮ್ಮನಹಳ್ಳಿ ಹೋಬಳಿ ಸಮಿತಿ ಎಚ್ಚರಿಸಿದೆ.
ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಘದ ಕಾರ್ಯಕರ್ತರು, ಆ ಪ್ರತಿಭಟನೆಗೆ ತಡೆ ಒಡ್ಡಿದರೆ ಫೆಬ್ರುವರಿ 5ರಂದು ಡಣಾಪುರದಲ್ಲಿ ಹೆದ್ದಾರಿ ತಡೆ ಚಳವಳಿ ನಡೆಸಲಾಗುವುದು, ಆಗ ರೈತರಿಗೆ ಏನಾದರೂ ತೊಂದರೆ ಉಂಟಾದರೆ ಅದಕ್ಕೆ ಸರ್ಕಾರವೇ ಹೊಣೆಹೊರಬೇಕಾಗುತ್ತದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಗೋಣಿಬಸಪ್ಪ ಎಚ್ಚರಿಕೆ ನೀಡಿದರು.
ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಬೇಕು, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಏತ ನೀರಾವರಿ ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದೂ ಒತ್ತಾಯಿಸಲಾಯಿತು.
ಮುಖಂಡರಾಧ ಬಾಣದ ಶಿವಪ್ಪ, ಇಬ್ರಾಹಿಂ ಸಾಬ್, ಗಂಟಿ ಸೋಮಶೇಖರ್, ಬಸವನಗೌಡ, ಕೆ.ಯಮನೂರಪ್ಪ, ಹುಸೇನ್ ಸಾಬ್, ಮೃತ್ಯುಂಜಯ ಗೌಡ ಸರ್ದಾರ್, ದೊಡ್ಡ ಹುಲಗಪ್ಪ, ಪರುಶುರಾಮ, ಪುಷ್ಪಾವತಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.