ADVERTISEMENT

ಹೊಸಪೇಟೆ | ಪ್ರವಾಹ ಭೀತಿ: ಶಾಶ್ವತ ಪರಿಹಾರ ಕಂಡುಕೊಳ್ಳಿ: ವೆಂಕಟೇಶ್ ಟಿ.

​ಪ್ರಜಾವಾಣಿ ವಾರ್ತೆ
Published 31 ಮೇ 2023, 15:31 IST
Last Updated 31 ಮೇ 2023, 15:31 IST
ಹೊಸಪೇಟೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು
ಹೊಸಪೇಟೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು   

ಹೊಸಪೇಟೆ (ವಿಜಯನಗರ): ‘ಜಿಲ್ಲೆಯಲ್ಲಿ 22 ಗ್ರಾಮಗಳು ನದಿ ಪಾತ್ರದಲ್ಲಿ ಬರುತ್ತಿದ್ದು, ನದಿ ನೀರು ಹೆಚ್ಚಾದಲ್ಲಿ ಮುಳುಗಡೆಯಾಗುವ ಸಂಭವವಿದೆ. ಅಂತಹ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ವೆಂಕಟೇಶ್ ಟಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅವರು ಮಾತನಾಡಿದರು.

‘ಹೂವಿನಹಡಗಲಿ ತಾಲ್ಲೂಕಿನ 16 ಗ್ರಾಮಗಳು ಸೇರಿದಂತೆ ಒಟ್ಟು 22 ಗ್ರಾಮಗಳು ನದಿ ಪಾತ್ರಗಳಲ್ಲಿವೆ. ಹೂವಿನಹಡಗಲಿಯ ಕುರುವತ್ತಿ ಹಾಗೂ ಬ್ಯಾಲಹುಣಸಿ ಗ್ರಾಮಗಳಲ್ಲಿ ನದಿ ನೀರು ಹೆಚ್ಚಾದಾಗ ಹಲವು ಮನೆಗಳು ಮುಳುಗಡೆಯಾಗುತ್ತವೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.