
ಹೊಸಪೇಟೆ (ವಿಜಯನಗರ): ನಗರದ ಬಸವೇಶ್ವರ ವೃತ್ತ ಸಮೀಪದ ಸಿದ್ಧಿಪ್ರಿಯ ಕಲ್ಯಾಣ ಮಂಟಪದ ಹಿಂಭಾಗದ ಪುಣ್ಯಕೋಟಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಗುರುವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಒಳರೋಗಿಗಳಿಗೆ ಯಾವುದೇ ಅಪಾಯ ಉಂಟಾಗಿಲ್ಲ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅವಗಡ ಸಂಭವಿಸಿತು. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಹಳೆಯ ಬೆಡ್ ಮತ್ತಿತರೆ ಸಾಮಗ್ರಿಗಳನ್ನು ಇಡಲಾಗಿತ್ತು. ಅವುಗಳಿಗೆ ಬೆಂಕಿ ಹೊತ್ತಿಕೊಂಡು ಉರಿಯತೊಡಗಿತು. ಆಗ ಕೆಳಗಿನ ಮಹಡಿಯಲ್ಲಿದ್ದ ಒಂಬತ್ತು ಮಂದಿ ಮಾನಸಿಕ ಅಸ್ವಸ್ಥ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಇತರ ಮಹಡಿಗಳತ್ತ ವ್ಯಾಪಿಸುವ ಮೊದಲೇ ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು. ಹೀಗಾಗಿ ದೊಡ್ಡ ಮಟ್ಟಿನ ಅನಾಹುತ ತಪ್ಪಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.